ಸಂಗೊಳ್ಳಿ ರಾಯಣ್ಣ – ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು. ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು. ಬ್ರಿಟಿಷರು ಚನ್ನಮ್ಮನನ್ನು ಬೈಲಹೊಂಗಲದಲ್ಲಿ ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು. ಜನವರಿ ೨೬ ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ ಆಗಸ್ಟ್ ೧೫ ೧೭೯೮ , ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ ಜನವರಿ ೨೬ , ಭಾರತವು ಗಣರಾಜ್ಯವೆಂದು ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...
Comments
Post a Comment