Skip to main content

ಹಾಲುಮತ ಮಹಾನ್ ಶಿವಶರಣರು ತುರುಗಾಹಿ ರಾಮಣ್ಣ

ಹಾಲುಮತ ಮಹಾನ್ ಶಿವಶರಣರು
ತುರುಗಾಹಿ ರಾಮಣ್ಣ

ತುರುಗಾಹಿ ರಾಮಣ್ಣ ಶಿವಶರಣ, ವಚನಕಾರ, ಶ್ರೇಷ್ಠ ಜ್ಞಾನಿ, ಆಧ್ಯಾತ್ಮದಲ್ಲಿ ಅತುಳವಾದ ಆಸಕ್ತಿಯನ್ನು ಹೊಂದಿದ್ದವ, ಇವನ ಊರು,ತಂದೆ ತಾಯಿ-ಈ ಬಗ್ಗೆ ಎಲ್ಲಿಯೂ ಉಲ್ಲೇಖವಿಲ್ಲ.

ಕಾಲ

ಈತನ ಕಾಲ ಸು. 1160 ಅಂದರೆ ಈತ ಬಸವಣ್ಣ, ಅಲ್ಲಮಪ್ರಭು ಮುಂತಾದವರ ಸಮಕಾಲೀನ, ಬಸವಣ್ಣ, ಚೆನ್ನಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ-ಇವರು ಲಿಂಗೈಕ್ಯರಾದ ಸಮಯದಲ್ಲಿ ಜೀವಿಸಿದ್ದನೆಂದೂ ಅನಂತರ ಇವನೂ ಲಿಂಗೈಕ್ಯನಾದನೆಂದೂ ತಿಳಿದುಬರುತ್ತದೆ.

ಕಾಯಕ

ಬಸವಣ್ಣನವರ ಭಕ್ತಿಪಂಥಕ್ಕೆ ಸೇರಿದ ಈತನಿಗೆ ಶಿವಶರಣರ ದನಗಳನ್ನು ಕಾಯುವುದೇ ಕಾಯಕವಾಗಿದ್ದಿತು. ಸರಳವಾದ ನಿರಾಡಂಬರವಾದ, ಬಹು ಸುಂದರವಾದ ಜೀವನ ಇವನದಾಗಿದ್ದಿತು. ನಿತ್ಯವೂ ನೇಮದಂತೆ ಶರಣರ ಮನೆಯ ಬಾಗಿಲಿಗೆ ಹೋಗಿ ಕಟ್ಟಿದ ಹಸು ಕೂಡಿದ ಹಸು ಬಿಡಿರೆ-ಎಂದು ಕೂಗುತ್ತಿದ್ದ. ಶರಣರ ಸತಿಯರು ಬಿಟ್ಟ ದನಗಳನ್ನು ದಿನವಿಡೀ ಕಾಯ್ದು ಸಂಜೆಗೆ ದೊಡ್ಡಿಗಳಿಗೆ ತಂದು ಕೂಡುತ್ತಿದ್ದ. ದಿನವೂ ಬಣ್ಣಬಣ್ಣದ ದನಗಳನ್ನು ನೋಡುತ್ತ ಅವನ್ನು ಮುದ್ದಾಡುತ್ತ ವಿವಿಧ ಹೆಸರುಗಳಿಂದ ಅವನ್ನು ಕರೆಯುತ್ತ ಕಾಲವನ್ನು ಬಹು ಸಂತಸದಿಂದ ಕಳೆಯುತ್ತಿದ್ದ. ಹಸುವಿಗೆ ಹಾಗ, ಎತ್ತಿಂಗೆ ಹಣವಡ್ಡ, ಕರುವಿಗೆ ಮೂರು ಹಣ ಹೀಗೆ ಕೂಲಿಯನ್ನು ತೆಗೆದುಕೊಂಡು `ಅವಕಾವಲ್ಲಿಯಾದರೂ ಭಾವಶುದ್ಧವಾಗಿರಬೇಕು ಎಂಬ ಜೀವನಸೂತ್ರವನ್ನು ಹಿಡಿದು, ಊರಿನ ದನಕಾಯುವ ಕೆಲಸದಲ್ಲಿಯೇ ಮಹತ್ತನ್ನು ಕಂಡುಕೊಂಡು ಈತ ಮುಕ್ತಿಯನ್ನು ಹೊಂದಿದ.[೧]

ವಚನಗಳು ಸಂಪಾದಿಸಿ

ಇಲ್ಲಿಯ ವರೆಗೆ ಈತನ 45 ವಚನಗಳು ಮಾತ್ರ ದೊರೆತಿವೆ. ಗೋuಪತಿನಾಥ ವಿಶ್ವೇಶ್ವರಲಿಂಗ ಎಂಬುದು ಇವನ ಅಂಕಿತ. ಇವನ ವಚನಗಳು ಸಂಖ್ಯೆಯಲ್ಲಿ ಅಲ್ಪವಾದರೂ ಸತ್ತ್ವಯುತಾಗಿವೆ. ಇವುಗಳಲ್ಲಿ ಮೊದಲ ಹದಿನೇಳು ಇವನ ಕಾಯಕಕ್ಕೆ ಸಂಬಂಧಿಸಿವೆ. ಇವುಗಳಲ್ಲಿ ಈತ ದನಕಾಯ್ದು ಪಡೆದ ದಿವ್ಯಾನುಭವ ಸಾಂಕೇತಿಕವಾಗಿ ವ್ಯಕ್ತವಾಗಿದೆ. ಅತ್ತಿತ್ತ ಚಲಿಸುವ ನೂರಾರು ಕುಲಗಳ, ನೂರಾರು ಹಸುಗಳನ್ನು ಒಂದೇ ಒಂದು ಕೋಲು ನಿಲ್ಲಿಸುವಂತೆ ನಾವು ಏಕಚಿತ್ತವನ್ನು ಗಳಿಸಿಕೊಂಡು ಲಿಂಗವನ್ನರಿಯಬೇಕು ಎಂಬುದಾಗಿ ಸಾಂಕೇತಿಕವಾಗಿ ಈತ ಹೇಳಿದ್ದಾನೆ. ಉಳಿದ ವಚನಗಳಲ್ಲಿ ನಿಷ್ಠೆ, ತ್ರಿವಿದಭಕ್ತಿ, ಷಟ್‍ಸ್ಥಲ, ಕ್ರೀಶುದ್ಧಿ, ಭಾವಶುದ್ಧಿ, ಚಿತ್ತಶುದ್ಧಿಗಳು ಭೇದಾಭೇದ ಭಾವ-ಮುಂತಾದ ತತ್ತ್ವದ ವಿಷಯಗಳು ಪ್ರತಿಪಾದಿತವಾಗಿವೆ.

Comments

Popular posts from this blog

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆಯನ್ನೊಮ್ಮೆ ಓದಿ

ಸಂಗೊಳ್ಳಿ ರಾಯಣ್ಣ  –  ಬ್ರಿಟಿಷರ  ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬ.  ಕಿತ್ತೂರು ಚೆನ್ನಮ್ಮಳ  ಬಲಗೈ ಬಂಟನಾದವನು ಸಂಗೊಳ್ಳಿ ರಾಯಣ್ಣ. ಪರಿಚಯ ಸಂಪಾದಿಸಿ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿರುವ ನೇಗಿನಹಾಳ ಗ್ರಾಮವು ಕೆಂಚವ್ವನ ತವರು ಮನೆಯಾಗಿದ್ದರು ಸಂಗೊಳ್ಳಿಯು ರಾಯಣ್ಣನ ಜನ್ಮಸ್ಥಳ ಹಾಗೂ ಹೋರಾಟದ ಭೂಮಿಯಾಗಿದೆ. ಚೆನಮ್ಮಳ ಆಸ್ತಾನದಲ್ಲಿ ವಾಲಿಕರ್ ವೃತ್ತಿ ಮಾಡುವ ಕುರುಬ ಮನೆತನದವನಾಗಿದ್ದ ರಾಯಣ್ಣನನ್ನು ಜನ, ರಾಯಾ ಎಂದು ಕರೆಯುತ್ತಿದರು. ಅಷ್ಠೆ ಅಲ್ಲದೆ ಈತನು ಗೇರಿಲ್ಲಾ ತಂತ್ರದ ರೂವಾರಿಯಾಗಿದ್ದನು.  ಬ್ರಿಟಿಷರ  ವಿರುದ್ಧದ ಯುದ್ಧದಲ್ಲಿ ಚನ್ನಮ್ಮ ಹಾಗು ರಾಯಣ್ಣ ಇಬ್ಬರೂ ಸೆರೆಯಾಳಾದರು.  ಬ್ರಿಟಿಷರು ಚನ್ನಮ್ಮನನ್ನು  ಬೈಲಹೊಂಗಲದಲ್ಲಿ  ಸೆರೆಯಲ್ಲಿಟ್ಟರು. ಸಂಗೊಳ್ಳಿ ರಾಯಣ್ಣನನ್ನು ಬ೦ಧಿಸಿ ನ೦ದಗಡ ದಲ್ಲಿ ಗಲ್ಲಿಗೆರಿಸಿದರು.  ಜನವರಿ ೨೬  ೧೮೩೧ರಂದು ಗಲ್ಲಿ ಗೇರಿಸಿದರು. ಸಂಗೊಳ್ಳಿ ರಾಯಣ್ಣ ಜನಿಸಿದ ದಿನಾಂಕವಾದ  ಆಗಸ್ಟ್ ೧೫  ೧೭೯೮ ,  ಭಾರತಕ್ಕೆ  ಸ್ವಾತಂತ್ರ್ಯ ದೊರೆತ ದಿನಾಂಕವಾದರೆ, ಆತ ಗಲ್ಲಿಗೇರಿದ ದಿನಾಂಕ  ಜನವರಿ ೨೬ , ಭಾರತವು  ಗಣರಾಜ್ಯವೆಂದು  ಘೋಷಿಸಿದ ದಿನಾಂಕವಾಗಿದೆ. ರಾಯಣ್ಣನ ಉಕ್ತಿ, “ನನ್ನ ಕೊನೆ ಆಸೆ ಏನೆಂದರೆ, ಮತ್ತೆ ನಾನು ಈ ದೇಶದಲ್ಲಿ...

ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ ಸಾಮ್ರಾಜ್ಯವನ್ನು ಕಟ್ಟಿದವರು.

ಕುರುಬ ಒಂದು ಹಿಂದು ಸಮುದಾಯದ ಹೆಸರು. ಕುರುಬ ಎಂದರೆ ಹುಡುಕುವ ಅಥವ ಪಡೆಯುವ ಎಂದು ಅರ್ಥ ಬರುತ್ತದೆ. ಉದಾಹರಣೆ: ಜೇನು ಕುರುಬ ಜಾತಿ ಎಂದರೆ ಜೇನು ಹುಡುಕುವ ಜಾತಿ. ಕುರುಬರು ಹಾಲುಮತ ಅನುಯಾಯಿಗಳು. ಕುರುಬ ಎಂದರೆ ಜ್ಞಾನವನ್ನು(ಭ) ಹುಡುಕುವವನು (ಕುರು) ಎಂಬ ದಾರ್ಮಿಕ ಅರ್ಥವು ಇದೆ. ಕುರುಬ ಜಾತಿಯು ಅತಿ ಪುರಾತನವಾದ ಜಾತಿ.  ಇತಿಹಾಸ ಪೂರ್ವ ಕುರುಬ ಜನಾಂಗ ತುಂಬಾ ಪುರಾತನವಾದ ಜನಾಂಗ , ರಾಮಾಯಣ ಮತ್ತು ಮಹಾಭಾರತ ಕಾಲದಲ್ಲಿ ಕುರು ವಂಶ ಮತ್ತು ಯದು ವಂಶಗಳ ಪ್ರಸ್ತಾವನೆಯಾಗಿದೆ. ಮಾನವನು ಮೊದಲು ಕಾಡುಗಳಲ್ಲಿ ಬೇಟೆ ಆಡಿ ಮತ್ತು ಅಲೀದು ಗೆಡ್ಡೆ, ಗೆಣಸು ತಿನ್ನುತಿದ್ದ , ಕ್ರಮೇಣ ಅವನು ಪ್ರಾಣಿಗಳನ್ನು ಪಳಗಿಸಿ ಸಾಕ ತೊಡಗಿದ, ಆ ನಂತರ ಅವನು ವ್ಯವಸಾಯ ಮಾಡುವದನ್ನು ಕಲಿತ, ನಂತರ ಅವನು ಹಳ್ಳಿಗಳಲ್ಲಿ ವಾಸಿಸ ತೊಡಗಿದ. ಕುರುಬರು ಈ ಎಲ್ಲ ಮಾನವನ ಆಯಾಮಗಳನ್ನು ದಾಟಿದವರು. ಅತಿ ಪುರಾತನವಾದ ಈ ಸಮುದಾಯದಿಂದ ಕಾಲ ಕ್ರಮೇಣ ಇತರೆ ಜನಾಂಗದವರು ಬೇರೆಯಾಗ ತೊಡಗಿದರು. ಉದಾಹರಣೆಗೆ ವಕ್ಕಲುತನ ಮಾಡುವನು ವಕ್ಕಲಿಗನಾದ, ಬೇಟೆಯಾಡು ವವನು ಬೇಡನಾದ , ಮಡಿಕೆ ಮಾಡುವವನು ಕುಂಬಾರನಾದ , ಈ ಇತರೆ ಜನಾಂಗದವರು ಮಾನವನ ಬೇಡಿಕೆಗಳಿಗೆ ಅನುಗುಣವಾಗಿ ತಮ್ಮ ವೃತ್ತಿಗಳನು ಮಾಡತೊಡಗಿದರು. ಹೀಗೆ ಪುರಾತನವಾದ ಕುರುಬ ಮತ್ತು ಯಾದವ ವಂಶಗಳಿಂದ ಸಣ್ಣ ಪುಟ್ಟ ಜಾತಿಗಳು ಹುಟ್ಟಿಕೊಂಡವು. ಭಾರತ ಇತಿಹಾಸ . ಕುರುಬರು ಭಾರತದ ಇತಿಹಾಸದ ಮೊದಲ ಸಾಮ್ರಾಜ್ಯವಾದ ಮೌರ್ಯ...

ಕುರುಬರ ಇತಿಹಾಸ ತಿಳಿಯಿರಿ

ಕುರುಬರ ಇತಿಹಾಸ ಪರಂಪರೆ, ಭಾಗ ೨೮ ಹಾಲುಮತ ಹುಕ್ಕಬುಕ್ಕ ಸಾಂಸ್ಕೃತಿಕ ಪ್ರತಿಷ್ಠಾನ ಬಳ್ಳಾರಿ ಕುರುಭರು.. ನಾವು ಕುರುಭರು ಕುರುಭರು ಇಚ್ಚಿಸಿದ್ದಲ್ಲಿ ಅವರಿಗೆ ವೈಷ್ಣವ ದೀಕ್ಷೆ ನೀಡುತ್ತೇನೆ :-- ಪೇಜಾವರ ಶ್ರೀ ಪಾದರು , ಉಡುಪಿ ನಿಮ್ಮ ಯಾವ ದೀಕ್ಷೆಯೂ ನಮಗೆ ಬೇಕಾಗಿಲ್ಲ , ಕುರುಭರು ತಾಯಿ ಗರ್ಭದಲ್ಲಿ ಇರುವಾಗಲೇ ದೀಕ್ಷೆ ಪಡೆದವರು :- ಸಿದ್ದರಾಮಯ್ಯ , ಪ್ರಸ್ತುತ ಮುಖ್ಯಮಂತ್ರಿ ವಾಹ್..! ಎಂಥಾ ಮಾತು ಸಿದ್ದರಾಮಯ್ಯ.. ಅಂದು ನನಗೆ ಸಿದ್ದರಾಮಯ್ಯ ಬಹಳವೇ ಇಷ್ಟವಾದರು , ಮನುಷ್ಯ ತನ್ನ ಕುಲದ ಸತ್ ಸಂಪ್ರದಾಯ ಬಿಟ್ಟುಕೊಡಲಿಲ್ಲ ...! ಭೇಷ್ ಎನಿಸಿತು.  ಕುರುಭರ ಇತಿಹಾಸ ತಿಳಿಯಿರಿ. ಕುರುಭರು ಮೂಲತಃ ನಾಗಕುಲದವರು ಎನ್ನಿಸಿಕೊಳ್ಳುವರು , ಪಲ್ಲವರು ಎಂದು ಕರ್ನಾಟಕದಲ್ಲಿ , ಪೊಲಿಯಾರ್ / ಪೊಲಯರ್ ಎಂದು ಕೇರಳದಲ್ಲಿ ಪಲ್ಲಿಗ ಎಂದು ಮಹಾರಾಷ್ಟ್ರದಲ್ಲಿ , ಉತ್ತರ ಭಾರತದೆಡೆ ಹಟ್ಟಿಗಾರರೆಂದು ಗುರುತಿಸಲ್ಪಡುತ್ತಾರೆ‌. ಕುರುಭ ( ಕುರು - ಪರತತ್ವ ಭ - ಗಳಿಸುವವ) ಎಂಬ ದೀಕ್ಷಾ ಪದ್ದತಿ. ಕುರುಭ ಒಂದು ಸಿದ್ದ ಶೈವ ಶಾಖೆ. ಕುರುಭರು ಅರ್ಥಾತ್ ಪಲ್ಲವರು 5-7ನೇ ಶತಮಾನದಲ್ಲಿ ಲಿಂಗ ದರಿಸುತ್ತಿದ್ದರು ಎಂಬ ವಿವರ ಶಾಸನಗಳಲ್ಲಿ ಇದೆ. ಪಲ್ಲವರ ಸಹೋದರ ವಂಶಾವಳಿ ಛಲವಾದಿ ಚಾಳುಕ್ಯ ಮಾದಿಗರು (ಕುರುಭರಲ್ಲಿ ಸಾದರು) ಸಹ ಲಿಂಗದಾರಿಗಳಾಗಿದ್ದ ವಿವರವಿದೆ. 2ನೇ ಶತಮಾನದಲ್ಲಿ ಭಾರತದ ವಂಶಸ್ಥರು ಭಾರ ಕುಲದ ಮಾದಿಗರು ಭಾರಶಿವ ನೆಂಬ ರಾಜ ...